ಜಿಲ್ಲೆ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಆಹ್ವಾನ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರೀಯ  ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳ ಭರ್ತಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜ. 17ರೊಳಗೆ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.