ಜಿಲ್ಲೆ

ತರಬೇತಿಗಾಗಿ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಪ್ರವಾಸೋದ್ಯಮ ಇಲಾಖೆಯಿಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಜಿಲ್ಲೆಯ ಪದವಿ ಮತ್ತು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 1 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಏ. 5ರೊಳಗೆ ಸಲ್ಲಿಸಬೇಕು. ಮಾಹಿತಿಗೆ ರಂಗಾಯಣ ಆವರಣದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.