ಮೈಸೂರು: 2023-24 ನೇ ಸಾಲಿಗೆ ಪಾಲಕರ ವಾರ್ಷಿಕ ವರಮಾನ 2.5 ಲಕ್ಷದೊಳಗಿರುವ ಮೈಸೂರು ತಾಲೂಕಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದೆ. ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಏ.15 ಕೊನೇ ದಿನ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ, ತಮ್ಮ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐದಲ್ಲಿ (ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು.
ಮಾಹಿತಿಗಾಗಿ ದೂ. 0821-2520910 ಸಂಪರ್ಕಿಸಬಹುದು.