ಬೆಂಗಳೂರು: ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಹತ್ತು ಸಾವಿರ ಅತಿಥಿ ಶಿಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅವಕಾಶ ನೀಡಿದೆ. 13,352 ಖಾಯಂ ಶಿಕರ ನೇಮಕಾತಿ ಪ್ರಕ್ರಿಯೆ ವಿಳಂಬ ಹಾಗೂ ವರ್ಗಾವಣೆ ಪ್ರಕ್ರಿಯೆಯಿಂದ ಹಲವು ಶಾಲೆಗಳಲ್ಲಿ ಶಿಕರ ಕೊರತೆ ಸೃಷ್ಟಿಯಾಗಿರುವ ಹಿನೆ್ನೆಲೆಯಲ್ಲಿ ಅತಿಥಿ ಶಿಕರ ನೇಮಿಸಲು ಸರ್ಕಾರ ಮುಂದಾಗಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎಂಟು ಸಾವಿರ ಶಿಕರು ಮತ್ತು ಸರ್ಕಾರಿ ಪ್ರೌಢ ಶಾಲೆಗಳಿಗೆ ಎರಡು ಸಾವಿರ ಶಿಕರನ್ನು ನೇಮಿಸಲು ಸರ್ಕಾರ ಮಂಜೂರಾತಿ ನೀಡಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕರು ಕೌನ್ಸಿಲಿಂಗ್ ಮೂಲಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಖಾಲಿಯಾಗಿರುವ ಹುದ್ದೆಗಳನ್ನು ಕೌನ್ಸಿಲಿಂಗ್ ಮೂಲಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕರಿಂದ ಭರ್ತಿ ಮಾಡಲು ಕ್ರಮ ತೆಗೆದುಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ.
ಇದನ್ನೂ ಓದಿ: Kirik Keerthi Announces His Divorce With Arpitha | ಕರಿಮಣಿ ಮಾಲೀಕ ನಾನಲ್ಲ; ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ
ಮೇ ತಿಂಗಳ ಅಂತ್ಯದಲ್ಲಿ ಸರ್ಕಾರ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ ಆರು ಸಾವಿರ ಅತಿಥಿ ಶಿಕರನ್ನು ಮಂಜೂರು ಮಾಡಿತ್ತು. ಇದೀಗ 10 ಹತ್ತು ಸಾವಿರ ಅತಿಥಿ ಶಿಕರ ನೇಮಕಕ್ಕೆ ಅವಕಾಶ ನೀಡಿದೆ. ಇದರಿಂದ ಅತಿಥಿ ಶಿಕರ ಒಟ್ಟು ಸಂಖ್ಯೆ 43 ಸಾವಿರಕ್ಕೆ ಏರಲಿದೆ. 2022-23ರ ಸಾಲಿನಲ್ಲಿ ಒಟ್ಟು 32,078 ಅತಿಥಿ ಶಿಕ್ಷಕರನ್ನು ನೇಮಿಸಲಾಗಿತ್ತು.