ಜಿಲ್ಲೆ

ನೀತಿ ಆಯೋಗದ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿಗೆ ನೇಮಕ

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯ, ಜಲ ಸಂಪನ್ಮೂಲ ಇಲಾಖೆಯ ನೀತಿ ಆಯೋಗವು ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆ ಕುರಿತು ರಾಷ್ಟ್ರೀಯ ಟಾಸ್ಕ್ ಫೋರ್ಸ್ ಸಮಿತಿ ರಚಿಸಿದೆ. ಇದರ ಸದಸ್ಯರನ್ನಾಗಿ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಅವರನ್ನು ನೇಮಿಸಲಾಗಿದೆ. ಸಮಿತಿಯ ಅವಧಿ 2 ವರ್ಷಗಳಾಗಿದ್ದು, ಸಮಗ್ರ ಜಲ ಸಂಪನ್ಮೂಲ ಅಭಿವೃದ್ಧಿ ಮತ್ತು ನಿರ್ವಹಣೆಗೆ ಸಂಬ0ಧಿಸಿದ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ.