ಜಿಲ್ಲೆ

ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿಗೆ ಸಂಯೋಜಕರುಗಳ ನೇಮಕ

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ವಿಧಾನಸಭಾ ಕ್ಷೇತ್ರದ ಸಂಯೋಜಕರುಗಳನ್ನಾಗಿ ಮತ್ತು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆ ನ ಸಹ ಸಂಯೋಜಕರುಗಳನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪರವರ ಶಿಫಾರಸ್ಸಿನಂತೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್‌ರವರ ಅನುಮೋದನೆಯೊಂದಿಗೆ ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಸಹ ಸಂಯೋಜಕ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿರವರು ನೇಮಕಾತಿ ಮಾಡಿ ಆದೇಶ ಪತ್ರ ನೀಡಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಕೊಲ್ಯದ ಗಿರೀಶ್ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕರಾಗಿ ಜಿ.ಎಂ.ಕಾಂತರಾಜುರವರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.


ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್‌ನ ಸಹ ಸಂಯೋಜಕರಾಗಿ ಮತ್ರಂಡ ದಿಲ್ಲು(ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್), ಹನೀಫ್ ಪಿ.ಎ (ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್), ಬೊಳ್ಳಂಡ ಗಿರೀಶ್ (ಶರಿ) (ನಾಪೋಕ್ಲು ಬ್ಲಾಕ್ ಕಾಂಗ್ರೆಸ್), ಪ್ರಕಾಶ್ ಆಚಾರ್ಯ (ಮಡಿಕೇರಿ ಬ್ಲಾಕ್ ಕಾಂಗ್ರೆಸ್) ಪಿ.ಎಂ.ಲತೀಫ್, (ಕುಶಾಲನಗರ ಬ್ಲಾಕ್ ಕಾಂಗ್ರೆಸ್) ಹಾಗೂ ಜನಾರ್ಧನ ಜಿ.ಎಲ್ (ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್) ಅವರುಗಳನ್ನು ನೇಮಿಸಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.