ಚಿಕ್ಕಮಗಳೂರು ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 
ಜಿಲ್ಲೆ

ರೈತಸಂಘಕ್ಕೆ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈಗ ಇರುವ ಸಮಿತಿ ಜೊತೆಗೆ ಜಿಲ್ಲಾ ಮತ್ತು ತಾಲೂಕು ಸಮಿತಿಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೈತ ಸಂಘದ ರಾಜ್ಯ ಸಮಿತಿ ಸದಸ್ಯರಾಗಿ ಎಂ.ಸಿ.ಬಸವರಾಜ, ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಬಿ.ಚಂದ್ರಶೇಖರ, ದಯಾನಂದ ನಿಡಘಟ್ಟ, ಟಿ.ಎ.ಮಂಜುನಾಥ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪರ್ವತೇಗೌಡ, ಜಿಲ್ಲಾ ಖಜಾಂಚಿಯಾಗಿ ಎಂ.ಆರ್.ಪರಮೇಶ್, ಯುವ ಘಟಕ ಅಧ್ಯಕ್ಷರನ್ನಾಗಿ ದರ್ಶನ್ ಅವರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಚಿಕ್ಕಮಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಸುನೀಲ್ ಕುಮಾರ್, ಕಾರ್ಯಾಧ್ಯಕ್ಷರಾಗಿ ಮರ್ಲೆ ಶಂಕರ್, ಗೌರವಾಧ್ಯಕ್ಷರಾಗಿ ಮರ್ಲೆ ಮಲ್ಲಪ್ಪ, ಎಚ್.ಎಸ್.ಲೋಕೇಶ, ಉಪಾಧ್ಯಕ್ಷರಾಗಿ ಕೆಸುವಿನ ಮನೆ ಆನಂದ, ಬಿಕ್ಕೆಮನೆ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಹಿರೇಗೌಜ ಉಮೇಶ್, ಖಜಾಂಚಿಯಾಗಿ ಜೆ.ಎಸ್.ಶಿವಣ್ಣ ಅವರನ್ನು ಆಯ್ಕೆ ಮಾಡಿ ಸಂಘಟನೆ ಬಲಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಹೇಶ್ ಉಪಸ್ಥಿತರಿದ್ದರು.