ಜಿಲ್ಲೆ

ಜೆಡಿಎಸ್ ಗೆ ಉಸ್ತುವಾರಿಗಳ ನೇಮಕ

Dharwada - Basavaraj Idli

ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಹಿರಿಯ ನಾಯಕ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಅವರನ್ನು ಪಕ್ಷದ ಬೆಳಗಾವಿ ವಿಭಾಗದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಪಕ್ಷದ ರಾಜ್ಯ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಜಿ. ಜ್ಯೋತಿ ಪ್ರಕಾಶ ಮಿರ್ಜಿ ಅವರನ್ನು ಧಾರವಾಡ ಹುಬ್ಬಳ್ಳಿ ಮಹಾನಗರ ಮತ್ತು ಧಾರವಾಡ ಜಿಲ್ಲೆಯ ಉಸ್ತುವಾರಿಯಾಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಹೆಚ್ಚುವರಿ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ನವೀನಕುಮಾರ ತಿಳಿಸಿದ್ದಾರೆ.