ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಮತ್ತು ಬೇರೆಡೆಗೆ ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು. 
ಜಿಲ್ಲೆ

ಗೋಪಾಲಪುರ ಶಾಲೆಯಲ್ಲಿ ಅಭಿನಂದನಾ ಮತ್ತು ಸನ್ಮಾನ ಕಾರ್ಯಕ್ರಮ

ಅಭಿನಯ್ ಎಚ್.ಎಂ

ಶನಿವಾರಸಂತೆ: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ಶಾಲೆಯಲ್ಲಿ ವಿದ್ಯೆ ಕಲಿಸುವ ಶಿಕ್ಷಕರು ಭವಿಷ್ಯ ರೂಪಿಸುವ ಟಾರ್ಚ್‌ಗಳಾಗಿರುತ್ತಾರೆ ಎಂದು ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಕೆ.ಪಿ.ಜಯಕುಮಾರ್ ಹೇಳಿದರು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ ಹಾಗೂ ಬೇರೆಡೆಗೆ ವರ್ಗಾವಣೆಗೊಂಡಿರುವ ಶಿಕ್ಷಕರು ಮತ್ತು ಹಂಡ್ಲಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗೆ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳ ಪಾಲಿಗೆ ಗುರುವಾಗಿ ಅಕ್ಷರಾಭ್ಯಾಸ ಮಾಡಿಸುವ ಮೂಲಕ ವಿದ್ಯಾವಂತರನ್ನಾಗಿ ಮಾಡುತ್ತಾರೆ. ಹಾಗಾಗಿ ಶಿಕ್ಷಕರಿಗೆ ಸಮಾಜದಲ್ಲಿ ಅತ್ಯಂತ ಗೌರವ ಸ್ಥಾನವಿದೆ ಎಂದರು.

ಸೇವೆಯಿಂದ ನಿವೃತ್ತಿ ಹೊಂದಿದ ಟಿ.ಕೆ.ಅಪ್ಪಸ್ವಾಮಿ, ಎಂ.ಎಂ.ಪ್ಯಾರಿ, ಎ.ಎಸ್.ಸ್ವಾತಿ, ಎಚ್.ಬಿ.ಚಂದ್ರಶೇಖರ್, ಹಂಡ್ಲಿ ಕ್ಲಸ್ಟರ್‌ನಿಂದ ಹಾಸನ ಜಿಲ್ಲೆಗೆ ಜಿಪಿಟಿ ಶಿಕ್ಷಕರಾಗಿ ವರ್ಗಾವಣೆಗೊಂಡಿರುವ ಎಂ.ಟಿ.ಮನೋಹರ್ ಅವರನ್ನು ಹಂಡ್ಲಿ ಕ್ಲಸ್ಟರ್‌ನ ನೂತನ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ನಿವೃತ್ತ ಶಿಕ್ಷಕ ಡಿ.ಬಿ.ಸೋಮಪ್ಪ ಮಾತನಾಡಿದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್.ಸುಬ್ಬಯ್ಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಕವಿತಾ, ಹಿರಿಯ ಶಿಕ್ಷಕರಾದ ಯಶೋದಾ, ಮಾಲತಿ, ಸುಧಾ, ಮಲ್ಲೇಶ್, ವಿಶ್ವನಾಥ್, ಪುಟ್ಟಸ್ವಾಮಿ ಇತರರಿದ್ದರು.