ಡಿಸಿಎಂ ಡಿ.ಕೆ.ಶಿವಕುಮಾರ್  
ಜಿಲ್ಲೆ

ಮೈಕ್ರೋ ಫೈನಾನ್ಸ್ ವಿರುದ್ಧ ಸೂಕ್ತ ಕಾನೂನು ಜಾರಿ

ಶಿವಮೊಗ: ಮೈಕ್ರೋ ಫೈನಾನ್ಸ್ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸೂಕ್ತ ಕಾನೂನು ಜಾರಿಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಹಣ ವಸೂಲಾತಿಗೆ ಕಿರುಕುಳ ನೀಡಲು ಅವಕಾಶವಿಲ್ಲ. ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮದ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದರು.

ಕುಂಭಮೇಳದಲ್ಲಿ ಮೃತಪಟ್ಟವವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಮೊದಲು ಘೋಷಿಸಬೇಕು. ನಂತರ ನಾವು ನಮ್ಮ ರಾಜ್ಯದ ಮೃತರ ಸಂಖ್ಯೆ ತರಿಸಿಕೊಂಡು ಅವರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸಬಹುದು ಎಂದರು.

ಕನ್ನಡ ಪರ ಹೋರಾಟದ ಕೇಸ್ ತೆಗೆದುಕೊಳ್ಳಲು ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಪರ ಹೋರಾಟಗಾರರು ಅರ್ಜಿ ಸಲ್ಲಿಸಿದ್ದು ಈ ಬಗ್ಗೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.