ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ  
ಜಿಲ್ಲೆ

ಕೇಂದ್ರೀಯ ವಿದ್ಯಾಲಯ ವಿಸ್ತರಿಸಲು ಅನುಮೋದನೆ

ಶಿವಮೊಗ್ಗ: ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಎಲ್ಲ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗ ತೆರೆಯಲಾಗುತ್ತದೆ. ಈ ನಿರ್ಧಾರವು ಕ್ಷೇತ್ರದ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಮಹತ್ವದ ಹೆಜ್ಜೆಯಾಗಿರುತ್ತದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ದಾಖಲಾತಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು, ಶೈಕ್ಷಣಿಕ ಸೌಲಭ್ಯ ವಿಸ್ತರಿಸಲು ಕೇಂದ್ರದ ಶಿಕ್ಷಣ ಸಚಿವಾಲಯಕ್ಕೆ ವಿನಂತಿಸಲಾಗಿತ್ತು. ಪರಿಶೀಲನೆ ನಂತರ ಸಚಿವಾಲಯ ಅಗತ್ಯವಿದ್ದ ವಿಸ್ತರಣೆಗೆ ಅನುಮೋದನೆ ನೀಡಿದೆ. ಇದರಿಂದ ಜಿಲ್ಲೆಗೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಬಂದಷ್ಟೇ ಸಂತೋಷವಾಗಿದೆ ಎಂದಿದ್ದಾರೆ.