ಅರಕೇರಾ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ವಿದ್ಯೆಯಿಂದ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ ಹೇಳಿದರು.
ಎ.ವೆಂಕಟೇಶ ನಾಯಕ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಐ ಪ್ಲಡ್ಜ್ ಸಂಸ್ಥೆ ಸಹಯೋಗದೊಂದಿಗೆ ನೋಟ್ ಬುಕ್ ಉಚಿತ ವಿತರಣೆ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಐ ಪ್ಲಡ್ಜ್ ಸಂಸ್ಥೆಯವರು ಯಾವುದೇ ನಿರೀಕ್ಷೆ ಇಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಳೆದ ಹತ್ತು ವರ್ಷಗಳಿಂದ ಶ್ರಮಿಸುತ್ತಿದೆ. ಸಂಸ್ಥೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಬೆಳೆದು ಬಡ ಮಕ್ಕಳ ಕಲ್ಯಾಣಕ್ಕೆ ಮುಂದಾಗಲಿ ಎಂದರು.
ತಾಲೂಕಿನ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಯ ನಾಲ್ಕು ಸಾವಿರ ವಿದ್ಯಾರ್ಥಿಗಳಿಗೆ ತಲಾ ಆರು ನೋಟ್‌ಬುಕ್‌ಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು. ಮುಖ್ಯ ಶಿಕ್ಷಕ ಶ್ರೀಧರ್, ಬಸಯ್ಯ ಸಾತಲ್, ನಾಗರಾಜ ಹಳ್ಳೆ, ಮಹೇಶ್, ಲಿಂಗಣ್ಣ ಹವಾಲ್ದಾರ್ ಇತರರಿದ್ದರು.