ಅರಸೀಕೆರೆ : ವ್ಯಸನಗಳಿಂದ ದೂರವಿದ್ದರೆ ಜೀವನ ಸುಖಮಯವಾಗಿರುತ್ತದೆ ಎಂದು ನಗರಠಾಣೆ ಇನ್ಸ್‌ಪೆಕ್ಟರ್ ಗಂಗಾಧರ್ ಹೇಳಿದರು. ನಗರದ ಪ್ರತಿಭಾ ಪ.ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಂಗಳವಾರ ಮಾದಕ ವಸ್ತು ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳು ಬೀಡಿ, ಸಿಗರೇಟ್, ಗುಟ್ಕಾ, ಜರ್ದಾ, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ದಾಸರಾಗಬಾರದು. ಪಠ್ಯ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಶಾರೀರಿಕ ಹಾಗೂ ಮಾನಸಿಕ ವಿಕಸನಕ್ಕೆ ಮುಂದಾಗಬೇಕು. ಗುರು, ಹಿರಿಯರನ್ನು ಗೌರವಿಸುವ ಪರಿಪಾಠ ರೂಢಿಸಿಕೊಂಡರೆ ಉನ್ನತ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂಬುದನ್ನು ಮರೆಯಬಾರದು ಎಂದರು.