ಮಡಿಕೇರಿ:
ಅರೆಭಾಷೆ ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡು ಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟ ಹಾಗೂ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟ ಸಹಯೋಗದಲ್ಲಿ ಭಾಗಮಂಡಲದ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾಂಸ್ಕೃತಿ ನೆಲಗಟ್ಟು ಉಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು. ಅರೆಭಾಷಿಕರು ಸ್ವಾತಂತ್ರ‍್ಯ ಪೂರ್ವದಲ್ಲಿ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಅಮರ ಸುಳ್ಯ ಇತಿಹಾಸ ಇದಕ್ಕೆ ಸಾಕ್ಷಿ. ಹಾಗಾಗಿ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಭಾಗಮAಡಲ ಗ್ರಾ.ಪಂ. ಅಧ್ಯಕ್ಷÀ ಕಾಳನ ರವಿ ಮಾತನಾಡಿ ಎರಡು ವರ್ಷಗಳ ಹಿಂದೆ ಭಾಗಮಂಡಲದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಲಾಗಿತ್ತು. ಆ ನಿಟ್ಟಿನಲ್ಲಿ ಇಂದು ಅಕಾಡೆಮಿ ವತಿಯಿಂದ ಅರೆಭಾಷೆ ಗಡಿನಾಡ ಉತ್ಸವ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಇದಕ್ಕೆ 2 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ ಅರೆಭಾಷೆ ಅಕಾಡೆಮಿ ಸ್ಥಾಪನೆಗೆ ಹಲವರು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಅಕಾಡೆಮಿ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ಮಾತನಾಡಿ ಅರೆಭಾಷೆ ಐನ್‌ಮನೆ ಸಂಸ್ಕೃತಿ, ಸಾಂಸ್ಕೃತಿಕ ಸಮಾವೇಶ, ಹಿಂಗಾರ ತ್ರೈಮಾಸಿಕ ಪತ್ರಿಕೆ ತರುವುದು, ಸಾಕ್ಷ್ಯಚಿತ್ರ ನಿರ್ಮಾಣ, ಆಕಾಶವಾಣಿಯಲ್ಲಿ ಸುದ್ದಿಜೊಂಪೆ ಸುದ್ದಿ ಪ್ರಸಾರ... ಹೀಗೆ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು ಅರೆಭಾಷೆ ಸಂಸ್ಕೃತಿಯನ್ನು ಪಸರಿಸುವಲ್ಲಿ ಶ್ರಮಿಸಲಾಗಿದೆ ಎಂದರು.
ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮಾತನಾಡಿ ಕನ್ನಡ, ಇಂಗ್ಲೀಷ್, ಅರೆಭಾಷೆ ನಿಘಂಟು ಸೇರಿದಂತೆ ಹಲವು ಪುಸ್ತಕಗಳನ್ನು ಹೊರತರುವ ಮೂಲಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಎಲ್ಲೆಡೆ ಪಸರಿಸಲು ಶ್ರಮಿಸಲಾಗಿದೆ. ಐಎಸ್‌ಒ ಕೋಡ್ ಪಡೆಯಲು ಪ್ರಯತ್ನಿಸಲಾಗಿದೆ. ಹೀಗೆ ವಿವಿಧ ಚಟುವಟಿಕೆ ಕೈಗೊಳ್ಳುವ ಮೂಲಕ ಅರೆಭಾಷೆ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿತ್ತು ಎಂದರು.
ಅಕಾಡೆಮಿಯ ಮತ್ತೊಬ್ಬ ಮಾಜಿ ಅಧ್ಯಕ್ಷ ಪಿ.ಸಿ. ಜಯರಾಮ ಮಾತನಾಡಿ ಅರೆಭಾಷೆ ಗಡಿನಾಡ ಉತ್ಸವಕ್ಕೆ ಸಂಗಮದAತೆ ಇಂದಿನ ಕಾರ್ಯಕ್ರಮಕ್ಕೆ ಸೇರಿರುವುದು ಸಂತಸ ತಂದಿದೆ ಎಂದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿರಿಯರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಗ್ಯಾರಂಟಿ ಯೋಜನಾ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ, ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಭಾಗಮಂಡಲ ನಾಡ ಗೌಡ ಸಮಾಜದ ಅಧ್ಯಕ್ಷ ಪಿ. ಪಳಂಗಪ್ಪ, ಕರಿಕೆ ಗೌಡ ಸಮಾಜದ ಅಧ್ಯಕ್ಷ ಕೋಡಿ ಪೊನ್ನಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕÀ ಹೊಸೂರು ಜೆ. ಸತೀಶ್ ಕುಮಾರ್, ಪಟ್ಟಡ ಶಿವಕುಮಾರ್, ಕೆ.ಜೆ. ದಿವಾಕರ, ಲತಾಶ್ರೀ ಮೋಂಟಡ್ಕ, ಭಾಗಮಂಡಲ ನಾಡುಗೌಡ ಯುವ ಒಕ್ಕೂಟದ ಅಧ್ಯಕ್ಷÀ ಕುದುಕುಳಿ ಕಿಶೋರ್ ಕುಮಾರ್, ರಿಜಿಸ್ಟಾçರ್ ಚಿನ್ನಸ್ವಾಮಿ, ಕಾರ್ಯಕ್ರಮ ಸಂಚಾಲಕ ಸೂದನ ಎಸ್. ಈರಪ್ಪ ಅಕಾಡೆಮಿ ಸದಸ್ಯರು ಇದ್ದರು.