ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ.28ರಂದು ಮಡಿಕೇರಿ ಗೌಡ ಸಮಾಜಭವನದಲ್ಲಿ ನಡೆಯುವ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುವಾರ ಸುಳ್ಯ ಮೊಗರ್ಪಣೆ ಬಳಿಯ ನಿವೃತ್ತ ಬಿ.ಡಿ.ಒ. ಮೀನಾಕ್ಷಿ ಗೌಡ ಅವರ ನಿವಾಸದಲ್ಲಿ ಬಿಡುಗಡೆಗೊಳಿಸಲಾಯಿತು.
ಮೀನಾಕ್ಷಿ ಗೌಡ ಆಮಂತ್ರಣಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾಹಿತಿ ನೀಡಿದರು. ಮೀನಾಕ್ಷಿ ಗೌಡ ಅವರನ್ನು ಸನ್ಮಾನಿಸಲಾಯಿತು.
ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು, ಡಾ.ಎನ್.ಎ.ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ವ್ಯವಸ್ಥಾಪಕ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು. ಡಾ.ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಪೇರಾಲು ವಂದಿಸಿದರು.