ಮಂಗಳೂರು : ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಸಾಹಿತಿ ರಘು ಇಡ್ಕಿದುರವರ 31ನೇ ಕೃತಿ ‘ಅರಿಮುಡಿ’ಯನ್ನು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ಬಿಡುಗಡೆಗೊಳಿಸಿದರು. ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ ಅವರು ಕೃತಿ ಪರಿಚಯಿಸಿದರು. ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಕೆ.ಎಂ., ಪ್ರಾಂಶುಪಾಲೆ ಲತಾ ಮಹೇಶ್ವರಿ ಕೆ.ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಕಾಶಕಿ ವಿದ್ಯಾ ಯು., ಕೃತಿಕಾರ ರಘು ಇಡ್ಕಿದು ಉಪಸ್ಥಿತರಿದ್ದರು. ವಿನಮ್ರ ಇಡ್ಕಿದು ಕಾರ್ಯಕ್ರಮ ನಿರೂಪಿಸಿದರು.