ಜಿಲ್ಲೆ

ಅಂತಾರಾಷ್ಟ್ರೀಯ ಯೋಗಾಸನದಲ್ಲಿ ಅರ್ಪಿತಾ ಸಾಧನೆ: ಮಲೇಷಿಯಾದಲ್ಲಿ ನಡೆದಿದ್ದ ಸ್ಪರ್ಧೆ

ಮಂಡ್ಯ: ಮಲೇಷಿಯಾದಲ್ಲಿ ಅ.14ರಂದು ನಡೆದ ಏಷ್ಯಾ ಪೆಸಿಫಿಕ್ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕಿನ ಜವನಹಳ್ಳಿ ಗ್ರಾಮದ ಅರ್ಪಿತಾ ಮೂರನೇ ಸ್ಥಾನ ಪಡೆದ ಸಾಧನೆ ಮಾಡಿದ್ದಾರೆ.

ಗ್ರಾಮದ ಕುಮಾರ್ ಎಂಬುವರ ಪುತ್ರಿ ಅರ್ಪಿತಾ ಭಾರತವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಕೃಷಿ ಇಲಾಖೆಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೂನ್‌ನಲ್ಲಿ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದ್ದ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್‌ನಲ್ಲಿ 4ನೇ ಹಾಗೂ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ರಾಜ್ಯಮಟ್ಟದ ಡಬ್ಲುೃಎಫ್ ಯೋಗಾಸನ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದರು. ಬಳಿಕ ಕೇರಳದ ಎರ್ನಾಕುಲಂನಲ್ಲಿ ನಡೆದ ರಾಷ್ಟ್ರಮಟ್ಟದ ಯೋಗಾಸನ ಚಾಂಪಿಯನ್ ಶಿಪ್‌ನಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈಕೆ ಈವರೆಗೆ ಎರಡು ರಾಜ್ಯಮಟ್ಟ ಹಾಗೂ ಎರಡು ರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.