ಜಿಲ್ಲೆ

ರೆಡಿಮೇಡ್ ಬಟ್ಟೆಯಲ್ಲಿ ₹4.50 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ

ಶಿವರಾಜ.ಎಂ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ರೆಡಿಮೇಡ್ ಬಟ್ಟೆಗಳ ಪ್ಯಾಕ್‌ನಲ್ಲಿ ನಿಷೇಧಿತ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ 2 ಕೆ.ಜಿ. 820 ಗ್ರಾಂ ಎಂಡಿಎಂ ಕ್ರಿಸ್ಟಲ್, 7 ಮೊಬೈಲ್ ೆನ್, 2 ತೂಕದ ಯಂತ್ರ ಸೇರಿ 2.6 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ಅದಿಗಾನಹಳ್ಳಿಯಲ್ಲಿ ವಾಸ: ನೈಜೀರಿಯಾ ಮೂಲದ ಪೆಡ್ಲರ್‌ಗಳು ಗ್ರಾಮಾಂತರ ಜಿಲ್ಲೆ ಹೊರವಲಯದ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಖಚಿತ ಮಾಹಿತಿ ಮೇರೆಗೆ ವಿದೇಶಿಗರು ವಾಸವಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೈಜೀರಿಯಾದ ಮೂವರು ಪೆಡ್ಲರ್‌ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದು ಬೆಂಗಳೂರು ನಗರಪ್ರದೇಶ ಬಿಟ್ಟು ಗ್ರಾಮೀಣ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಸ್ಥಳೀಯರಿಗೆ ಅನುಮಾನ ಬಾರದ ರೀತಿಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುವವರಂತೆ ಸಮವಸಗಳನ್ನು ಧರಿಸಿಕೊಂಡು ಓಡಾಡುತ್ತಿದ್ದರು. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಅನುಮಾನಸ್ಪದ ಚಲನವಲನ: ಆರೋಪಿಗಳ ಚಲನವನದ ಬಗ್ಗೆ ಸ್ಥಳೀಯರು ಸಂಶಯಗೊಂಡಿದ್ದರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು ಪೊಲೀಸರು ಆರೋಪಿಗಳ ಚಲನವಲನದ ಮೇಲೆ ನಿಗಾ ಇಟ್ಟಿದ್ದರು, ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ಮಾಡಿದ್ದಾರೆ.

ಬಟ್ಟೆಗಳಲ್ಲಿ ಡ್ರಗ್ಸ್: ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ರೆಡಿಮೆಡ್ ಬಟ್ಟೆಗಳ ಪ್ಯಾಕ್‌ಗಳಲ್ಲಿ ತುಂಬಿ ಡ್ರಗ್ಸ್ ಮಾರಾಟ ಮಾಡ್ತಿದ್ದರು, ಶರ್ಟ್, ಪ್ಯಾಂಟ್‌ಗಳಲ್ಲಿ ಬಳಸುವ ಕಾರ್ಡ್‌ಬೋರ್ಡ್‌ಗಳಲ್ಲಿ ಮಾದಕ ವಸ್ತುಗಳನ್ನ ಇಟ್ಟು ಮಾರಾಟ ಮಾಡುತ್ತಿದ್ದರು. ನೆರೆಹೊರೆಯವರಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.