ವಿಟ್ಲ: ಅಳಿಕೆ ಎರುಂಬು ಮೆಣಸಿನಗಂಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಗಳನ್ನು ತಪಾಸಣೆ ನಡೆಸಿದ ಪೊಲೀಸರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸಿದ ವಿಚಾರ ತಿಳಿದು ಬಂದಿದ್ದು, ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್(೨೩), ಪೊನ್ನೊಟ್ಟು ನಿವಾಸಿ ಮಹಮ್ಮದ್ ರಾಝಿಕ್(೨೩), ಮಂಗಳಪದವು ನಿವಾಸಿ ಚೇತನ್(೨೩) ಬಂಧಿತರಾಗಿದ್ದಾರೆ.
ಬಂಧಿತರಿಂದ ೬.೨೭ ಗ್ರಾಂ ತೂಕದ ಗಾಂಜಾ, ೩ ಮೊಬೈಲ್, ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿದ್ದಾರೆ. ಸೆ.೧೫ರಂದು ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕ ರಾಮಕೃಷ್ಣ ಸಿಬ್ಬಂದಿಗಳೊಂದಿಗೆ ಗಸ್ತಿನಲ್ಲಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಕರಣ ತನಿಖೆ ಸಂದರ್ಭ ಇನ್ನೊಬ್ಬನ ಹೆಸರು ಕೇಳಲ್ಪಟ್ಟಿದ್ದು, ಎರ್ಮೆಮಜಲು ನಿವಾಸಿ ಧ್ಯಾನ್ ಕರ್ಕೇರ(೨೩) ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ.