ಜಿಲ್ಲೆ

ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಸೌಮ್ಯ ಆರ್

ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಕಿರಿಯ ಪೊಲೀಸರಿಂದ ಲಂಚ ಸ್ವೀಕರಿಸುತ್ತಿದ್ದ ಕೆಎಸ್‌ಆರ್‌ಪಿ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಿರಿಯ ಪೊಲೀಸರನ್ನು ಕರ್ತವ್ಯಕ್ಕೆ ನೇಮಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ಕೆಎಸ್‌ಆರ್‌ಪಿ ಇನ್‌ಸ್ಪೆಕ್ಟರ್ ಮೊಹಮ್ಮದ್ ಹಾರೀಸ್ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಪ್ರತಿ ತಿಂಗಳು 6 ಸಾವಿರ ಲಂಚ ನೀಡಲು ಹಾರೀಸ್ ಡಿಮ್ಯಾಂಡ್ ಮಾಡಿದ್ದರು. ಬುಧವಾರ 18 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ.ನಟರಾಜ್, ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.