ಜಿಲ್ಲೆ

ಜೂಜಾಡುತ್ತಿದ್ದ 12 ಜನರ ಬಂಧನ

ಅವಿನಾಶ್ ಜೈನಹಳ್ಳಿ

ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ.


ಇತ್ತೀಚೆಗೆ ಖಚಿತ ಮಾಹಿತಿ ಮೇರೆಗೆ ಕುವೆಂಪುನಗರ ಪೊಲೀಸ್ ಠಾಣಾ ಸರಹದ್ದಿನ ಅರವಿಂದ ನಗರ, 4ನೇ ಕ್ರಾಸ್, ಮನೆ ನಂ. 25 ರ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜು ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಜತೆಗೆ ಸ್ಥಳದಲ್ಲಿ ದೊರೆತ 64,680 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.