ಮುಂಡಗೋಡ: ತಾಲೂಕಿನ ದಾಸನಕೊಪ್ಪ ರಸ್ತೆಯ ಧರ್ವ ಜಲಾಶಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದವನ ಮೇಲೆ ಶನಿವಾರ ಪೊಲೀಸರು ದಾಳಿ ನಡೆಸಿ 2 ಕೆ.ಜಿ ಗಾಂಜಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ.
ಹಾನಗಲ್ಲ ತಾಲೂಕಿನ ತಿರವಳ್ಳಿ ಗ್ರಾಮದ ಸಲ್ಮಾನಖಾನ ಆಲೂರ (24) ಬಂಧಿತ.
ದಾಸನಕೊಪ್ಪ ರಸ್ತೆಯ ಧರ್ವ ಜಲಾಶಯ ಹತ್ತಿರ ಕೇಸರಿ ಬಣ್ಣದ ಕೈ ಚೀಲದಲ್ಲಿ 2 ಕೆ.ಜಿ. 28 ಗ್ರಾಂ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಇಲ್ಲಿನ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ 80 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಪಿಐ ಬಿ.ಎಸ್. ಲೋಕಾಪುರ ನಿರ್ದೇಶನದಂತೆ ಪಿಎಸ್ಐಗಳಾದ ಯಲ್ಲಾಲಿಂಗ ಕುನ್ನೂರ ಮತ್ತು ಹನಮಂತ ಕುಡಗುಂಚಿ ನೇತೃತ್ವದಲ್ಲಿ ಸಿಬ್ಬಂದಿ ಗಣಪತಿ ಹೊನ್ನಳ್ಳಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬಡಗೇರ, ಬಸವರಾಜ ಲಮಾಣಿ, ಸಂಜು ರಾಠೋಡ ಗುರುರಾಜ ಬಿ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.