ಅಂಕೋಲಾ: ಗಾಂಜಾ ಸೇವಿಸಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ವಸತಿ ಗೃಹವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರವಾರ ಬೈತಕೋಲ ನಿವಾಸಿ ಗಿರೀಶ ಚಂದ್ರ ಭಂಡಾರಿ (19) ಬಂಧಿತ ಆರೋಪಿ.
ಪಟ್ಟಣದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ಕುಳಿತಿದ್ದ ಈತ ಮಾದಕವಸ್ತು ಸೇವಿಸಿದವರಂತೆ ವರ್ತಿಸುತ್ತಿದ್ದ. ಆತನ ಬಾಯಿಂದ ಘಾಟು ವಾಸನೆ ಬರುತ್ತಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು, ಕಾರವಾರ ವೈದ್ಯಕೀಯ ಕಾಲೇಜು ಸಂಸ್ಥೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿದ್ದು, ಧೃಡ ಪಟ್ಟಿದೆ. ಈ ಮೊದಲು ಪೊಲೀಸರ ವಿಚಾರಣೆ ವೇಳೆಯಲ್ಲಿ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.