Oplus_0 
ಜಿಲ್ಲೆ

ಅಕ್ರಮವಾಗಿ ಮದ್ಯ ಮಾರುತ್ತಿದ್ದವನ ಬಂಧನ

ಯಳಂದೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಯಳಂದೂರು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಬಂಧಿತ ಆರೋಪಿ.

ಶುಕ್ರವಾರ ರಾತ್ರಿ ಪಟ್ಟಣದ ಮಹೇಶ್ವರ ಚಿತ್ರಮಂದಿರದ ಸಮೀಪದ ಎಂಆರ್‌ಪಿ ಬಾರ್‌ನಿಂದ ನಾಡಮೇಗಲಮ್ಮ ದೇವಸ್ಥಾನಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮದ್ಯದ ಪೌಚಗಳನ್ನು ತುಂಬಿ ಮಾರಾಟ ಮಾಡುತ್ತಿದ್ದ. ಈ ವೇಳೆ ಪಟ್ಟಣದ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಆಕಾಶ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 14 ಸಾವಿರ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದೆ.

ಕಾರ್ಯಚರಣೆಯಲ್ಲಿ ಸಿಬ್ಬಂದಿ ಜಡೇಸ್ವಾಮಿ, ರಂಗಸ್ವಾಮಿ, ನಂಜುಂಡಸ್ವಾಮಿ, ಶಿವಮೂರ್ತಿ, ನಾಗೇಂದ್ರ ಇತರರು ಇದ್ದರು.