ಜಿಲ್ಲೆ

ಚಾಕು ಇಟ್ಟುಕೊಂಡು ಓಡಾಡುತ್ತಿದ್ದವರ ಬಂಧನ

ಹುಬ್ಬಳ್ಳಿ: ಬೈಕ್‌ನಲ್ಲಿ ಚಾಕು ಇಟ್ಟುಕೊಂಡು ಓಡಾಡುತ್ತಿದ್ದ ಮೂವರ ವಿರುದ್ಧ ಇಲ್ಲಿಯ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಶೀಫ್ ಎಂ. ಸೇರಿ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಕಾರವಾರ ರಸ್ತೆಯಲ್ಲಿ ಭಾನುವಾರ ರಾತ್ರಿ ಬೈಕ್‌ನಲ್ಲಿ ಎರಡು ಚಾಕು ಇಟ್ಟುಕೊಂಡು ಓಡಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಸಮರ್ಪಕ ಉತ್ತರ ಕೊಡದೆ ಇದ್ದಾಗ ಪ್ರಕರಣ ದಾಖಲಿಸಲಾಗಿದೆ.