ಜಿಲ್ಲೆ

ವಿವಾಹ ನಿರಾಕರಿಸಿದವನ ಬಂಧನ

ವಿರಾಜಪೇಟೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿ ಗರ್ಭವತಿಯಾದ ನಂತರ ಮದುವೆಗೆ ನಿರಾಕರಿಸಿದ ತೋರಗ್ರಾಮದ ಗಣಪತಿ(ಚುಮ್ಮಿ)(20) ಎಂಬುವವನನ್ನು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಣಪತಿ ಹಾಗೂ ಯುವತಿ (20) ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ತಾನು ಗರ್ಭವತಿಯಾಗಿರುವುದನ್ನು ಗಣಪತಿಗೆ ತಿಳಿಸಿ ವಿವಾಹವಾಗುವಂತೆ ಒತ್ತಾಯಿಸಿದ್ದಾಳೆ. ಆದರೆ, ಗಣಪತಿ ವಿವಾಹಕ್ಕೆ ನಿರಾಕರಿಸಿದ. ಈ ವಿಚಾರವನ್ನು ಮನೆಯವರಿಗೆ ತಿಳಿಸಲು ಅಂಜಿ ಯುವತಿ ಆತ್ಮಹತ್ಯೆಗೆ ಯತ್ನಿಸಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ.

ಈ ಸಂದರ್ಭ ವಿಷಯವನ್ನು ಪಾಲಕರಿಗೆ ತಿಳಿಸಿದ್ದು, ಪಾಲಕರು ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಲಾಗಿ, ಗಣಪತಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ನಿರ್ದೇಶನದಲ್ಲಿ, ವಿರಾಜಪೇಟೆ ವೃತ್ತ ನಿರೀಕ್ಷಕ ಶಿವರುದ್ರ, ಉಪ ನಿರೀಕ್ಷಕ ಮಂಜುನಾಥ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.