ಉಪ್ಪಳ: ಐಲ ಗೇಟ್ ಪರಿಸರದ ಸಮುದ್ರ ಕಿನಾರೆಯಲ್ಲಿ ಗಾಂಜಾ ಸೇದುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಬಂದ ವಿದ್ಯಾರ್ಥಿಗಳು ಗಾಂಜಾ ಸೇದುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದಾಗ ಮೂವರು ಪರಾರಿಯಾಗಿದ್ದಾರೆ. ಅಲ್ಲಿದ್ದ ಮೂವರನ್ನು ಬಂಧಿಸಲಾಗಿದೆ. ಬಂಧಿತರು ಮಂಗಳೂರಿನ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಅವರನ್ನು ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.