ನೆಲಮಂಗಲ: ನಗರಸಭೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಶಮಿಗಿರಿ ಕ್ಷೇತ್ರ ಶ್ರೀ ಲ್ಮ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರ ವಿಗ್ರಹ ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂದಿಸಿರುವ ನಗರ ಪೊಲೀಸ್ ಠಾಣೆ ಪೊಲೀಸರು 2 ಲಕ್ಷ ರೂ. ಮೌಲ್ಯದ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಓಬನಾಯಕನಹಳ್ಳಿ ಗ್ರಾಮದ ನಿವಾಸಿ ಬಾದ್ಷಾಖಾನ್ (20), ಸೋಹಿದುಲ್ ಶೇಖ್ (23 ) ಬಂಧಿತರು. ಜ.26ರಂದು ನಗರಸಭೆ ವ್ಯಾಪ್ತಿಯ ಬಸವನಹಳ್ಳಿಯ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರ ವಿಗ್ರಹ ಕದ್ದು ಪರಾರಿಯಾಗಿದ್ದರು. ಈ ಕುರಿತು ದೂರು ದಾಖಲಿಸಿಕೊಂಡ ನಗರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಭರತ್ಗೌಡ ನೇತೃತ್ವದ ಪೊಲೀಸ್ ಸಿಬ್ಬಂದಿ ಜ.27ರಂದು ಆರೋಪಿಗಳು ವಿಶ್ವೇಶ್ವರಪುರದ ಬಳಿ ಚಿಂದಿ ಆಯುತ್ತಿದ್ದ ವೇಳೆ ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸಿದಾಗ ವಿಗ್ರಹ ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಪೋಲೀಸರು ಬಂಧಿತರಿಂದ 2 ಲಕ್ಷ ರೂ. ಬೆಲೆಬಾಳುವ ದೇವರ ವಿಗ್ರಹ ವಶಪಡಿಸಿಕೊಂಡಿದ್ದಾರೆ.