ಹುಬ್ಬಳ್ಳಿ: ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಆಸೀಫ್ ಹಾಗೂ ದೊಡ್ಡಪ್ಪ ದೊಡ್ಡಮನಿ ಎಂಬುವರು ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ, ಬಂಕಾಪೂರ ಚೌಕ್ ಬಳಿ ಮತ್ತೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಸಬಾಪೇಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಕಳ್ಳರನ್ನು ಬಂಧಿಸಿದ್ದಾರೆ. ಕಸಬಾಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.