ಜಿಲ್ಲೆ

ಅಕ್ರಮವಾಗಿ ಮದ್ಯ ಮಾರುತ್ತಿದ್ದ ಮೂವರ ಬಂಧನ

ಹನೂರು: ತಾಲೂಕಿನ ಮಂಗಲ ಗ್ರಾಮ ಹಾಗೂ ಹನೂರು ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದ 3 ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿದಂತೆ ಮೂವರನ್ನು ಹನೂರು ಪೊಲೀಸರು ಬಂಧಿಸಿದ್ದಾರೆ.


ಮಂಗಲ ಗ್ರಾಮದ ನಾಗರಾಜು (50), ಮಾದೇಶ (37) ಹಾಗೂ ಹನೂರಿನ ಜಯಮ್ಮ (53) ಬಂಧಿತರು. ಮಂಗಲ ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ಚಂದ್ರ, ನಂದಕುಮಾರ್ ಹಾಗೂ ಚಂದ್ರುಶೇಖರ್ ರಾತ್ರಿ ಗಸ್ತಿನಲ್ಲಿದ್ದಾಗ ಕಣ್ಣೂರು ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯ ಬಳಿಯ 2 ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ವೇಳೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿ 90 ಎಂಎಲ್‌ನ 16 ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದಿದ್ದಾರ


ಇನ್ನು ಹನೂರು ಪಟ್ಟಣದ ಅಂಬೇಡ್ಕರ್ ಬಡಾವಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್, ಸಿಬ್ಬಂದಿ ನಂದಕುಮಾರ್, ರಂಜಿತಾ ಹಾಗೂ ಚೈತ್ರಾ ಗಸ್ತಿನಲ್ಲಿದ್ದ ವೇಳೆ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ, 90 ಎಂಎಲ್‌ನ 12 ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.