ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ನಡೆದಿದ್ದ ಗ್ಯಾಂಗ್‌ವಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬಂಧಿಸಲು ಹೋಗಿದ್ದ ಕಸಬಾಪೇಟ ಪೊಲೀಸರ ಮೇಲೆ ಕಲ್ಲು ಹಾಗೂ ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ನಡೆದಿದೆ.
ಬಾರಾ ರಫೀಕ್ ಹಾಗೂ ಜಾಧ್ ಸಾಧಿಕ್‌ನನ್ನು ಗಬ್ಬೂರ್ ಸರ್ಕಲ್ ಹತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದಲ್ಲಿ ಹವಾಲ್ದಾರ್ ಎಲ್.ವೈ. ಪಾಟೀಲ,, ಹಣಮಂತ ಬ್ಯಾಡಗಿ ಸೇರಿ ಕೆಲ ಸಿಬ್ಬಂದಿ ಇಬ್ಬರನ್ನು ಬಂಧಿಸಲು ಹೋದಾಗಿದ್ದರು. ಈ ಇಬ್ಬರು ರೌಡಿಗಳು ಕೊಲೆ ಹಾಗೂ ಜೀವ ಬೆದರಿಕೆ ಹಾಕಿದ್ದಲ್ಲದೇ ಕಲ್ಲು ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಚಾಣಾಕ್ಷತನ ಪ್ರದರ್ಶಿಸಿದ ಪೊಲೀಸರು, ಇಬ್ಬರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಸಣ್ಣ ಪುಟ್ಟ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಈ ಮೊದಲು ಅಫ್ತಾಬ್‌ನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದರು.