ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.  
ಜಿಲ್ಲೆ

ಅಪಪ್ರಚಾರ ನಡೆಸುತ್ತಿರುವ ಕಿಡಿಗೇಡಿಗಳನ್ನು ಬಂಧಿಸಿ

ಅಭಿನಯ್ ಎಚ್.ಎಂ

ನಾಪೋಕ್ಲು: ಇಲ್ಲಿಯ ಗ್ರಾಮ ಪಂಚಾಯಿತಿ ಆಡಳಿತ ಕಾಂಗ್ರೆಸ್ ಹಿಡಿತದಲ್ಲಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಅಭಿವೃದ್ಧಿ ಸಹಿಸದ ಕೆಲ ಕಿಡಿಗೇಡಿಗಳು ಪಂಚಾಯಿತಿ ಹಾಗೂ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಅವರಿಗೆ ಲಿಖಿತ ದೂರು ಸಲ್ಲಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ವಲಯ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಬೂತ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.