ಜಿಲ್ಲೆ

ಕಲಾಕೃತಿ ರಚನಾ ಶಿಬಿರ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಆಶ್ರಯದಲ್ಲಿ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗ ಮಟ್ಟದ ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕರ 5 ದಿನಗಳ ಕಲಾಕೃತಿ ರಚನಾ ಶಿಬಿರವನ್ನು ಸೆ. 23ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಆರ್ಟ್​ ಗ್ಯಾಲರಿಯಲ್ಲಿ ಆರಂಭಗೊಳ್ಳಲಿದೆ.
ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತೆ ಜಯಶ್ರೀ ಶಿಂತ್ರಿ ಶಿಬಿರ ಉದ್ಘಾಟಿಸುವರು. ಆಯುಕ್ತರ ಕಚೇರಿ ಆಡಳಿತ ಡಿಡಿಪಿಐ ಸಂಜೀವ ಬಿಂಗೇರಿ, ಡಯಟ್​ ಪ್ರಾಚಾರ್ಯೆ ಜಯಶ್ರೀ ಕಾರೇಕರ, ಹಿರಿಯ ಸಹಾಯಕ ನಿರ್ದೇಶಕ ಬಿ.ಎಂ. ಬಡಿಗೇರ, ಡಾ. ಬಸವರಾಜ ಕುರಿಯವರ ಹಾಗೂ ಗುರುಮೂರ್ತಿ ಯರಗಂಬಳಿಮಠ ಅತಿಥಿಗಳಾಗಿ ಪಾಲ್ಗೊಳ್ಳುವರು. ಇಲಾಖೆ ಜಂಟಿ ನಿರ್ದೇಶಕ ಈಶ್ವರ ನಾಯಕ ಅಧ್ಯಕ್ಷತೆ ವಹಿಸುವರು.
ಶೈಕ್ಷಣಿಕ ಬಲವರ್ಧನೆ ವರ್ಷ 2024-25ನೇ ಶೈಕ್ಷಣಿಕ ವರ್ಷದ ನಿಮಿತ್ತ ನಮ್ಮ ಶಾಲೆ-ನಮ್ಮ ಜವಾಬ್ದಾರಿ ಎಂಬ ಪ್ರಧಾನ ಆಶಯದ ಅಡಿ ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳ ವಿಕಾಸಕ್ಕೆ ಸಂಬಂಧಿಸಿ ವಿಜಯಪುರ, ಬಾಗಲಕೋಟ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಹಾವೇರಿ, ಗದಗ, ಶಿರಸಿ ಹಾಗೂ ಚಿಕ್ಕೋಡಿ ಜಿಲ್ಲೆಗಳ 50 ಜನ ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕರು ಕಲಾಕೃತಿ ಸಿದ್ಧಪಡಿಸಲಿದ್ದಾರೆ ಎಂದು ಹಿರಿಯ ಚಿತ್ರಕಲಾ ವಿಷಯ ಪರಿವೀಕ್ಷಕ ಪಿ.ಆರ್​. ಬಾರಕೇರ ತಿಳಿಸಿದ್ದಾರೆ.