ಮಂಗಳೂರು : ಹಳೇ ಹುಬ್ಬಳ್ಳಿಯಲ್ಲಿ ಎರಡು ವರ್ಷದ ಹಿಂದೆ ನಡೆದ ಗಲಭೆ ಪ್ರಕರಣವನ್ನು ವಾಪಸ್ ಪಡೆಯುವುದು ರಾಜ್ಯದ ಕಾಂಗ್ರೆಸ್ ಸರ್ಕಾರದ ಮೂರ್ಖತನದ ನಿರ್ಧಾರವಾಗಿದೆ. ಈ ನಿಲುವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು ಇದರ ವಿರುದ್ದ ತೀವ್ರವಾದ ಹೋರಾಟ ನಡೆಸಲಾಗುವುದೆಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಅರುಣ್.ಜಿ.ಶೇಟ್ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ಕೇವಲ ಒಂದು ಸಮುದಾಯದ ಓಲೈಕೆಯಾಗಿದ್ದು, ಗಲಭೆಕೋರರಿಗೆ ಮತ್ತಷ್ಟು ಬೆಂಬಲ ನೀಡುವುದರಲ್ಲಿ ಸಂಶಯವಿಲ್ಲ. ಈ ಪ್ರಕರಣವು ಹಿಂಪಡೆಯಲು ಅರ್ಹವಾಗಿಲ್ಲ ಎಂಬುದು ಪೊಲೀಸ್ ಇಲಾಖೆಯ ಅಭಿಪ್ರಾಯವೂ ಆಗಿದೆ. ಈ ಪ್ರಕರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕೆಲ ಕಿಡಿಗೇಡಿಗಳು ನೇರವಾಗಿ ಪೋಲಿಸರನ್ನೇ ಟಾರ್ಗೆಟ್ ಮಾಡಿದ್ದರು.ಇದನ್ನು ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಯಾದ ಎನ್‌ಐಎ ತನಿಖೆ ನಡೆಸುತ್ತಿರುವುದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಇಂತಹ ಮೂರ್ಖತನದ ನಿರ್ಧಾರ ಕೈಗೊಂಡಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.