ಜಿಲ್ಲೆ

ರಾಷ್ಟ್ರೋತ್ಥಾನ ಸಾಹಿತ್ಯದ ಕನ್ನಡ ಪುಸ್ತಕ ಹಬ್ಬ; ಶೇ.50 ರಿಯಾಯಿತಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರೋತ್ಥಾನ ಸಾಹಿತ್ಯದ 4ನೇ ಕನ್ನಡ ಪುಸ್ತಕ ಹಬ್ಬವು ಅ.26ರಿಂದ ಆರಂಭವಾಗಲಿದ್ದು, ಈ ಕುರಿತ ಭಿತ್ತಿಪತ್ರವನ್ನು ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ. ಪಿ. ಕುಮಾರ್ ಬಿಡುಗಡೆಗೊಳಿಸಿದರು.

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ರಾಷ್ಟ್ರೋತ್ಥಾನ ಪರಿಷತ್ ಕನ್ನಡ ಪುಸ್ತಕಗಳ ಹಬ್ಬವನ್ನು ಆಯೋಜಿಸಿಕೊಂಡು ಬಂದಿದೆ. ಅ.26 ರಿಂದ ಡಿ.1ರ ವರೆಗೆ 37 ದಿನಗಳ ಕಾಲ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪ ಸಭಾಂಗಣ, ಕನ್ನಡ ಪುಸ್ತಕ ಹಬ್ಬ ನಡೆಯಲಿದೆ.

ಕನ್ನಡ ಪುಸ್ತಕ ಹಬ್ಬದಲ್ಲಿ ಪುಸ್ತಕ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶವಿದ್ದು, ರಾಷ್ಟ್ರೋತ್ಥಾನ ಸಾಹಿತ್ಯವಲ್ಲದೇ ಬೇರೆ ಪ್ರಸಿದ್ಧ ಪುಸ್ತಕಗಳೂ ಕೂಡಾ ಲಭ್ಯವಿರುತ್ತವೆ. ಪುಸ್ತಕ ಹಬ್ಬದಲ್ಲಿ ಶೇ.50 ವರೆಗೆ ರಿಯಾಯಿತಿ ದರದಲ್ಲಿ ಪುಸ್ತಕ ದೊರೆಯಲಿದೆ.

ಇದೇ ವೇಳೆ ಹೊಸ ಪುಸ್ತಕಗಳ ಲೋಕಾರ್ಪಣೆ, ವಿದ್ಯಾರ್ಥಿಗಳಿಗಾಗಿ ಸ್ಪರ್ಧೆಗಳು, ಸಂಗೀತ, ನೃತ್ಯ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.