ಜಿಲ್ಲೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿಯೇ ಲಭ್ಯ ಕಣ್ಣಿನ ಉಚಿತ ಚಿಕಿತ್ಸೆ...

ಜಿಲ್ಲಾ ಸರ್ಜನ್​ ಡಾ. ಅಶೋಕ ಎಚ್​. ಮಾಹಿತಿ

ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಕಣ್ಣಿನ ಸಮಸ್ಯೆ ಇರುವವರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿಯೇ ಇನ್ನುಮುಂದೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೃಷ್ಟಿ ದೋಷ ಇರುವವರಿಗೂ ಆಸ್ಪತ್ರೆಯಲ್ಲಿ ಆರಂಭಿಸಿರುವ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿಯೇ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗುವುದು ಎಂದು ಜಿಲ್ಲಾ ಸರ್ಜನ್​ ಡಾ. ಅಶೋಕ ಎಚ್​. ತಿಳಿಸಿದರು.

ಉಡುಪಿಯ ಜಿಲ್ಲಾ ಆಸ್ಪತ್ರೆಯಲ್ಲಿ ಶಾಶ್ವತವಾಗಿ ಸ್ಥಾಪಿಸಲಾದ ಆಶಾಕಿರಣ ದೃಷ್ಟಿ ಕೇಂದ್ರ'ವನ್ನು ಜುಲೈ 3ರಂದು ಉದ್ಘಾಟಿಸಿ ಮಾತನಾಡಿದರು.

ಸಾರ್ವತ್ರಿಕವಾಗಿ ಜನರ ಕಣ್ಣಿನ ಆರೋಗ್ಯ ಉತ್ತಮಗೊಳಿಸುವುದು ಈ ಕೇಂದ್ರದ ಉದ್ದೇಶ. ಆ ನಿಟ್ಟಿನಲ್ಲಿ ನಿರಂತರವಾಗಿ ಕಣ್ಣಿನ ಸಮಗ್ರ ಆರೈಕೆಗಾಗಿ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಈ ಕೇಂದ್ರ ತೆರೆಯಲಾಗಿದೆ ಎಂದರು.

ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ. ಜೋತ್ಸ್ನಾ ಬಿ.ಕೆ., ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.