ಜಿಲ್ಲೆ

ಪುರ ಗ್ರಾಮ ಪಂಚಾಯಿತಿಗೆ ಅಶೋಕ್ ಉಪಾಧ್ಯಕ್ಷ

ಕಡೂರು: ಪುರ ಗ್ರಾಪಂ ಈ ಹಿಂದಿನ ಉಪಾಧ್ಯಕ್ಷ ಈಶ್ವರಪ್ಪ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ  ನಡೆದ ಚುನಾವಣೆಯಲ್ಲಿ ಅಶೋಕ್ ಮತ್ತು ಮನುಕುಮಾರ್ ಉಮೇದುವಾರಿಕೆ ಸಲ್ಲಿಸಿದ್ದರು. ಗ್ರಾಪಂನಲ್ಲಿ ನಡೆದ ಚುನಾವಣೆಯಲ್ಲಿ ಮನುಕುಮಾರ್ 2 ಮತ ಪಡೆದರೆ ಅಶೋಕ್ 8 ಮತ ಪಡೆದು ಜಯಗಳಿಸಿದರು.ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಸಹಾಯಕ ನಿರ್ದೇಶಕ ಜಯದೇವಪ್ಪ ಕಾರ್ಯನಿರ್ವಹಿಸಿದ್ದರು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತಗೊಳಿಸಿ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಬೇಕು. ಜನತಂತ್ರ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯವಾಗಿದು,್ದ ಗೆದ್ದ ಜನಪ್ರತಿನಿಧಿಗಳು ತಮ್ಮ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರು, ರಸ್ತೆ, ಬೀದಿದೀಪ ಸೇರಿದಂತೆ ಸರ್ಕಾರದ ಸವಲತ್ತುಗಳು ಜನಸಾಮಾನ್ಯರಿಗೆ ತಲುಪುವಂತೆ ಮಾಡಬೇಕು ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಕಂಸಾಗರ ರೇವಣ್ಣ ಮಾತನಾಡಿ, ಸದಸ್ಯರು ತಮ್ಮ ವ್ಯಾಪ್ತಿಯ ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿ ಶ್ರಮವಹಿಸಿದರೆ ಜನರ ಪ್ರೀತಿಗೆ ಪಾತ್ರರಾಗುವ ಜತೆಗೆ ಮರು ಆಯ್ಕೆ ಆಗುವುರಲ್ಲಿ ಸಂದೇಹವಿಲ್ಲ ಎಂದರು.

ನೂತನ ಉಪಾಧ್ಯಕ್ಷ ಅಶೋಕ್ ಮಾತನಾಡಿ, ಎಲ್ಲ ಸದಸ್ಯರ ವಿಶ್ವಾಸ ಮತ್ತು ಅಧ್ಯಕ್ಷರ ಜೊತೆ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.

ಗ್ರಾಪಂ ಅಧ್ಯಕ್ಷೆ ಸುಮಾ ಮಹೇಶ್, ಗ್ರಾಪಂ ಸದಸ್ಯರಾದ ರೇಣುಕಾ ಉಮೇಶ್, ಕುಮಾರ್, ಶಕುಂತಲಾ ರವಿ, ನಾಗಮ್ಮ ಶಿವಕುಮಾರ್, ಈಶ್ವರಪ್ಪ, ಮಂಜಮ್ಮ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಡಿ.ಎಸ್.ಉಮೇಶ್, ಕಾಂಗ್ರೆಸ್ ಮುಖಂಡರಾದ ಯಗಟಿ ಗೋವಿಂದಪ್ಪ, ಯರದಕೆರೆ ಎಂ.ರಾಜಪ್ಪ, ರೇಣುಕಾ ಉಮೇಶ್, ರವಿ, ಮಂಜಪ್ಪ ಮತ್ತಿತರಿದ್ದರು.