ಜಿಲ್ಲೆ

ಅಶೋಕ ನಗರ ಸಿಸಿ ರಸ್ತೆ ಕಾಮಗಾರಿ ಪ್ರಾರಂಭಕ್ಕೆ ಸೂಚನೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಇಲ್ಲಿನ ಅಶೋಕ ನಗರದ ಸಿಸಿ ರಸ್ತೆ ಕಾಮಗಾರಿಯನ್ನು ಆ. 24ರಿಂದ ಪ್ರಾರಂಭಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಟೆಂಗಿನಕಾಯಿ, ಈಗಾಗಲೇ ಈ ರಸ್ತೆ ಕಾಮಗಾರಿ ವಿಳಂಬವಾಗಿದೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಗುರುವಾರದಿಂದ ಕಾಮಗಾರಿ ಆರಂಭಿಸಲೇಬೇಕು ಎಂದು ಹೇಳಿದರು

ಈಗಾಗಲೇ ಭಾಗದ ಮುಖ್ಯ ರಸ್ತೆಗಳ ಕಾಮಗಾರಿ ಈಗಾಗಲೇ ಪೂರ್ಣಗೊಂಡಿವೆ. ಅಶೋಕನಗರ ರೈಲ್ವೆ ಸೇತುವೆಯಿಂದ ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮೀಜಿ ಮಠದ ಕಮಾನಿನಿಂದ ಅಶೋಕನಗರ ಚಿಗರಿ ಸರ್ಕಲ್ ವರೆಗೆ ರಸ್ತೆಯನ್ನು ಪೂರ್ಣಗೊಳಿಸುವುದು ಸೇರಿದಂತೆ ಇನ್ನಿತರ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ, ಬಿಜೆಪಿಯ ಸಿದ್ದು ಮೊಗಲಿಶೆಟ್ಟರ, ರವಿ ನಾಯಕ, ಲೋಕೋಪಯೋಗಿ ಇಲಾಖೆ ಅಧಿಕಾರಿ ವಿಜಯಕುಮಾರ ಪಾಟೀಲ ಹಾಗೂ ಇತರರು ಇದ್ದರು.