ಮಡಿಕೇರಿ: ಕರ್ನಾಟಕ ಸರ್ಕಾರದ ಬಸ್ ಸೇವೆಗಳಲ್ಲಿ ಒಂದಾದ ನೂತನ ಅಶ್ವಮೇಧ ಬಸ್‌ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಮಡಿಕೇರಿ-ಸೋಮವಾರಪೇಟೆ-ಅರಕಲಗೋಡು-ಚೆನ್ನರಾಯಪಟ್ಟಣ ಮಾರ್ಗ ಪ್ರತಿ ದಿನ ಬೆಳಗ್ಗೆ ೧೦.೧೫ ಗಂಟೆಗೆ ಹೊರಟು ಸಂಜೆ ೪.೪೫ ಗಂಟೆಗೆ ಬೆಂಗಳೂರು ತಲುಪಲಿದೆ. ಮಡಿಕೇರಿ-ಸೋಮವಾರಪೇಟೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯಾಗಿತ್ತು. ಬೇಡಿಕೆಯನ್ನು ಈಡೇರಿಸಲಾಗಿದೆ. ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಿಂದ ಸೋಮವಾರಪೇಟೆ ಮಾರ್ಗ ೩ ಬಸ್‌ಗಳು, ಕುಶಾಲನಗರದಿಂದ ೨ ಬಸ್‌ಗಳು ಸಂಚರಿಸುತ್ತಿವೆ ಎಂದು ತಿಳಿಸಿದರು.
ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದಲ್ಲಿ ೯೭ ಬಸ್‌ಗಳು ವಿವಿಧ ಮಾರ್ಗದಲ್ಲಿ ಸಂಚಾರ ಮಾಡುತ್ತಿವೆ. ಕುಶಾಲನಗರ ಕೆಎಸ್‌ಆರ್‌ಟಿಸಿ ಆರಂಭವಾದ ನಂತರ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ ಎಂದು ಡಾ.ಮಂತರ್ ಗೌಡ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಡಿಕೇರಿ ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕರಾದ ವೀರಭದ್ರಸ್ವಾಮಿ, ಸಂಚಾರಿ ನಿಯಂತ್ರಕರು ಇತರರು ಇದ್ದರು.