ಜಿಲ್ಲೆ

ಆದರ್ಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ.ವಿ. ಆರ್ ಕುಷ್ಟಗಿ ಇವರ ಜನ್ಮ ಶತಮಾನೋತ್ಸವ ನಿಮಿತ್ಯ ಆದರ್ಶ ಉತ್ಸವ-2024

Gadag - Shivanand Hiremath

Gadag: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ.ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ಐ ಕ್ಯೂ ಎ ಸಿ ಅಡಿಯಲಿ ಕಲಾ ವಿಭಾಗದಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಶ್ರೀ  ವಿ.ಆರ್. ಕುಷ್ಟಗಿ ಅವರ ಜನ್ಮ ಶತಮಾನೋತ್ಸವ ನಿಮಿತ್ಯ ಆದರ್ಶ ಉತ್ಸವ -2024 ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಟಿ ಎಸ್ ಭಾಸ್ಕರ್ ಅವರು ಜ್ಯೋತಿ ಬೆಳಗಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿ ಜ್ಞಾನ ಎಂಬುದು ಯಾರ ಸ್ವತ್ತಲ್ಲ. ಅನುಕರಿಸುತ್ತಲೇ ಕಲೆಯುವ ಕಲೆಯೇ ವಿದ್ಯೆ. ಮಕ್ಕಳಲ್ಲಿ ಜ್ಞಾನವೆಂಬ ಶಕ್ತಿ ಹೊರ ಹೊಮ್ಮಬೇಕಾದರೆ ಪೋಷಕರು ಅವರ ಮನಸ್ಸನ್ನು ಅರ್ಥ ಮಾಡಿಕೊಂಡು ಅದಕ್ಕೆ ಪೂರಕ ವಾತಾವರಣ ನಿರ್ಮಿಸಬೇಕು. ಮಕ್ಕಳು ಬರೀ ಶಾಲೆಯಲ್ಲಿ ಕಲಿತರೇ ಸಾಲದು. ಮನೆಯಲ್ಲಿ ಕೂಡ ಕಲಿಯಬೇಕಾದ್ದದ್ದು ಬಹಳಷ್ಟಿದೆ ಅದಕ್ಕಾಗಿ ಪೋಷಕರು ಮನೆಯಲ್ಲಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸಿ ಮಕ್ಕಳ ಜ್ಞಾನಾರ್ಜನೆಗೆ ಒತ್ತು ನೀಡಬೇಕು’  ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿದೆ ಆದ್ದರಿಂದ ಮಕ್ಕಳ ದೃಷ್ಟಿಯಿಂದ ಪೋಷಕರು ತಮ್ಮಲ್ಲಿರುವ ಕೆಟ್ಟ ಬುದ್ಧಿಯನ್ನ ತೊರೆದು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಬೆಳೆಯುತ್ತಾ ಮಕ್ಕಳ ಕೂಡ ಅದನ್ನೇ ಅನುಕರಿಸುತ್ತಾರೆ  ಇದರಿಂದ ಮಕ್ಕಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಎಂದು ತಮ್ಮ ಉದ್ಘಾಟನಾ ನುಡಿಗಳಲ್ಲಿ ಹಂಚಿಕೊಳ್ಳುವುದರೊಂದಿಗೆ ಆದರ್ಶ ಶಿಕ್ಷಣ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಬಹಳಷ್ಟು ಮೆಚ್ಚುಗೆ ಮಾತುಗಳನ್ನು ವ್ಯಕ್ತಪಡಿಸಿದರು. 

    ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿ ಆಗಮಿಸಿದ ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಹಾಗೂ ಭಾರತ ಸರ್ಕಾರದ ಐ.ಸಿ.ಸಿ.ಆರ್ ಸದಸ್ಯರಾದ ಡಾ. ಟಿ.ಎಸ್ ಭಾಸ್ಕರ ಸನ್ಮಾನೋತ್ತರವಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಪಠ್ಯೇತರ ಚಟುವಟಿಕೆಗಳು ವಿವಿಧ ಜೀವನ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಅದು ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಹಾಯ ಮಾಡುತ್ತದೆ. ಬಲವಾದ ನಾಯಕತ್ವದ ಗುಣಮಟ್ಟ, ಸಾಮಾಜಿಕ ಕೌಶಲ್ಯಗಳನ್ನು ನಿರ್ಮಿಸುವುದು, ಸಮಯದ ಮೌಲ್ಯ, ಆತ್ಮವಿಶ್ವಾಸವನ್ನು ಬೆಳೆಸುವುದು ಮುಂತಾದ ಮೌಲ್ಯಯುತ ಜೀವನ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬುವುದು. ವಿದ್ಯಾರ್ಥಿಗಳ ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ತಮ್ಮ ಮಾತುಗಳಲ್ಲಿ ಹಂಚಿಕೊಂಡರು. 

     ಉತ್ಸವದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಚೇರ್ಮನರಾದ ಶ್ರೀ ಆನಂದ್ ಪೋತ್ನಿಸ್  ಅವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಇದು ಒಂದು ಉತ್ತಮ ವೇದಿಕೆ ಅಷ್ಟೇ ಅಲ್ಲದೆ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಭಾರತ ಸರ್ಕಾರ್ ನೆಹರು ಯುವ ಕೇಂದ್ರ, ಬೆಂಗಳೂರು ಇವರು ಆಯೋಜಿಸಿದ್ದ ಯುವ ಉತ್ಸವ ಸಾಂಸ್ಕೃತಿಕ ಜನಪದ ನೃತ್ಯ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ, ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುವುದು ಅಷ್ಟೇ ಅಲ್ಲದೆ ಇವತ್ತು ಆ ವಿದ್ಯಾರ್ಥಿಗಳೊಂದಿಗೆ ಪಾಲಕರನ್ನು ಸನ್ಮಾನಿಸುತ್ತಿರುವುದು ಬಹಳಷ್ಟು ಹೆಮ್ಮೆಯ ವಿಷಯ ಆ ಎಲ್ಲ ಪಾಲಕರಿಗೆ ಸಂಸ್ಥೆಯಿಂದ ಅಭಿನಂದನೆಯನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಉದ್ದಿಮೆ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದ ದತ್ತ ಗ್ರೂಪ್ಸ್ನ ನಿರ್ದೇಶಕರಾದ ಶ್ರೀ ಶಿವನಗೌಡರ್ ಎಸ್ ಇವರನ್ನು ಗೌರವಿಸಲಾಯಿತು. 

     ವೇದಿಕೆ ಮೇಲೆ ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ ವಿ ಕುಷ್ಟಗಿ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಕೆ ಗಿರಿ ರಾಜಕುಮಾರ, ಉಪ ಪ್ರಾಚಾರ್ಯರಾದ ಡಾ. ವಿ ಟಿ ನಾಯ್ಕರ್, ಕಲಾವಿಭಾಗದ ಚೇರ್ಮನ್ ಪ್ರೊ. ಬಾಹುಬಲಿ ಪಿ ಜೈನರ  ಮಹಾವಿದ್ಯಾಲಯದ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ ಪಾಲಕರು ಉಪಸ್ಥಿತರಿದ್ದರು ನೃತ್ಯ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 10 ವಿದ್ಯಾರ್ಥಿನಿಯರನ್ನು ಈ  ಉತ್ಸವದಲ್ಲಿ ಸನ್ಮಾನಿಸಲಾಯಿತು.