ಜಿಲ್ಲೆ

ಕಿಶೋರ್ ಕುಮಾರ್ ಗೆಲುವಿಗೆ ಶ್ರಮ :ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕರೆ

ಸೌಮ್ಯ ಆರ್

ಉಳ್ಳಾಲ: ಪಕ್ಷ ಸಂಘಟನೆಯ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥ ಅಭ್ಯರ್ಥಿಯನ್ನೇ ಬಿಜೆಪಿ ವಿಧಾನ ಪರಿಷತ್ತಿನ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ನಾವೆಲ್ಲರೂ ಸೇರಿ ಕಿಶೋರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಯ ಉಪಚುನಾವಣೆ ಪ್ರಯುಕ್ತ ಶುಕ್ರವಾರ ಅಸೈಗೋಳಿ ಬಂಟರ ಭವನದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಅತ್ಯಂತ ಹಿಂದುಳಿದ ಜಾತಿಯ ಬಿಜೆಪಿ ಕಾರ್ಯಕರ್ತ ಕಿಶೋರ್ ಕುಮಾರ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು.

ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಚುನಾವಣಾ ಜಿಲ್ಲಾ ಸಂಚಾಲಕ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಂಡಲ ಅಧ್ಯಕ್ಷ ಜಗದೀಶ್ ಆಳ್ವ, ಬಂಟ್ವಾಳ ಚುನಾವಣಾ ಪ್ರಚಾರ ಸಂಚಾಲಕ ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.