ಮಂಡ್ಯ: ಅಸೋಷಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಜಿಲ್ಲೆ 268ರ ವತಿಯಿಂದ ನ.17ರಂದು ಮದ್ದೂರು ಪಟ್ಟಣದ ಟಿ.ಬಿ ವೃತ್ತದಲ್ಲಿರುವ ಖಾಸಗಿ ಸಭಾಂಗಣದಲ್ಲಿ ಪ್ರಾಂತೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಉಪ ಪ್ರಾಂತಪಾಲ ಎಚ್.ಮಾದೇಗೌಡ ತಿಳಿಸಿದರು.
ಅಂದು ಬೆಳಗ್ಗೆ 11 ಗಂಟೆಗೆ ಸಮ್ಮೇಳನವನ್ನು ಶಾಸಕ ಕೆ.ಎಂ.ಉದಯ್ ಉದ್ಘಾಟಿಸಲಿದ್ದು, ‘ವೈಜ್ಞಾನಿಕತೆ ನಮಗೇಕೆ ಬೇಕು’ ಎಂಬ ವಿಷಯದ ಕುರಿತು ರಾಜ್ಯ ವೈಜ್ಞಾನಿಕ ಸಂಶೋಧನೆ ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಡಾ.ನಟರಾಜ್ ಹುಲಿಕಲ್ ಪ್ರಧಾನ ಭಾಷಣ ಮಾಡಲಿದ್ದಾರೆ. ಕ್ಲಬ್‌ನ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ.ಭೈರಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು, ಅಂತಾರಾಷ್ಟ್ರೀಯ ನಿರ್ದೇಶಕ ಜಿ.ಪಿ.ದಿವಾಕರ್, ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಕೆ.ಎಂ.ಮುನಿಯಪ್ಪ, ಅಜಂತ ರಂಗಸ್ವಾಮಿ, ಜಿಲ್ಲೆ 268ರ ಉಪ ಪ್ರಾಂತಪಾಲ ಎಚ್.ಮಾದೇಗೌಡ, 2ನೆ ಉಪ ಪ್ರಾಂತಪಾಲ ಕೆ.ಆರ್.ಶಶಿಧರ್ ಈಚಗೆರೆ, ಸಂಪುಟ ಕಾರ್ಯದರ್ಶಿ ಕೆ.ಎಸ್.ಚಂದ್ರಶೇಖರ್, ಖಜಾಂಚಿ ಟಿ.ಎನ್.ರಕ್ಷಿತ್‌ರಾಜ್ ಸೇರಿ ಹಲವರು ಭಾಗವಹಿಸಲಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ವಿಚಾರಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದರು.
ಸಮ್ಮೇಳನಾಧ್ಯಕ್ಷೆ ವಸಂತಮ್ಮ, ಪ್ರಾಂತ-2ರ ಪ್ರಾಂತೀಯ ಅಧ್ಯಕ್ಷೆ ನೀನಾ ಪಟೇಲ್, ಕಾರ್ಯದರ್ಶಿ ವಿ.ಎಸ್.ನಾಗರಾಜ್ ಇದ್ದರು.