ಜಿಲ್ಲೆ

ಅಥಣಿ ಅಭಿವೃದ್ಧಿಗೆ ಪ್ರಾಶಸ್ತ್ಯ

ಅಥಣಿ: ಪಟ್ಟಣದ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 10 ಲಕ್ಷ ರೂ. ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಎಸ್‌ಎಂಎಸ್ ಕಾಲೇಜು ಎದುರಿರುವ ಶ್ರೀ ಯಲ್ಲಮ್ಮದೇವಿ ದೇವಸ್ಥಾನ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಶಾಸಕರ ಅನುದಾನದಡಿ ಯಲ್ಲಮ್ಮದೇವಿ ದೇವಸ್ಥಾನ ಅಭಿವೃದ್ಧಿಗೆ 10 ಲಕ್ಷ ರೂ ಮಂಜೂರು ಮಾಡಲಾಗಿದೆ. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.

ದೇವಸ್ಥಾನ ಸಮಿತಿಯ ಬಸವರಾಜ ಮಾದಗುಡಿ, ಮಂಜು ಮಾಳಿ, ಮುರುಗೆಪ್ಪ ಯಕ್ಕುಂಡಿ, ರಮೇಶ ಗಸ್ತಿ, ಭೀಮು ಬುಟ್ಟೆ, ಸಿದ್ದು ಕಲಮಡಿ, ಅನಿಲ ತೊಡಕರ, ಸಿದ್ದು ಮೊಟಗಿ, ಕಾರ್ಯನಿರ್ವಹಣಾಧಿಕಾರಿ ವಿ.ಎ.ವಾಲಿ, ಗುತ್ತಿಗೆದಾರ ಸಚಿನ ಪರಾಂಜಪೆ ಇತರರು ಇದ್ದರು.