ಜಿಲ್ಲೆ

ಆತೂರು ದೇವಸ್ಥಾನದ ವಾರ್ಷಿಕ ಜಾತ್ರೆ, ಮಹಾರಥೋತ್ಸವ

ಸೌಮ್ಯ ಆರ್

ಕಡಬ: ಕೊೈಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಶ್ರೀ ದೇವರ ಮಹಾರಥೋತ್ಸವ ನಡೆಯಿತು.

ಬೆಳಗ್ಗೆ ದೇವರ ಬಲಿ ಹೊರಟು ಉತ್ಸವ ನಡೆಯಿತು. ಸಂಜೆ ಬಲಿ ಹೊರಟು ಉತ್ಸವ, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು ನಡೆದು ರಾತ್ರಿ ದೇವರ ಮಹಾರಥೋತ್ಸವ, ಅಶ್ವತ್ಥ ಕಟ್ಟೆಪೂಜೆ ನಡೆಯಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣದ ಕುದ್ರೆತ್ತಾಯ, ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಹಾಗೂ ಇತರ ಪುರೋಹಿತರು ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್‌ಕುವಾರ್ ರೈ ಆರುವಾರ ಬಾಳಿಕೆ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್‌ರಾಜ್ ಶೆಟ್ಟಿ ಆರುವಾರ ಬಾಳಿಕೆ, ಶ್ರೀಧರ ಪೂಜಾರಿ ತುಂಬೆತ್ತಡ್ಕ, ಸಂಜೀವ ಸುದೆಂಗಳ, ಗೋಪಾಲ ನಾಯ್ಕ ಸೀಗೆತ್ತಡಿ, ಸುಜಾತಾ ಜೆ.ಶೆಟ್ಟಿ ಬಡಿಲ, ಮೀನಾಕ್ಷಿ ಕೆ.ಮುಂಡೈವಾರು, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಕೊರಿಕ್ಕಾರು, ಉಪಾಧ್ಯಕ್ಷರಾದ ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಶೀನಪ್ಪ ಗೌಡ ಪಲ್ಲಡ್ಕ, ರಾಜೀವ ಗೌಡ ಪೊಸಲಕ್ಕೆ, ಮೋಹನದಾಸ್ ಶೆಟ್ಟಿ ಬಡಿಲ, ಮುರಳಿಕೃಷ್ಣ ಬಡಿಲ, ಪ್ರಧಾನ ಕಾರ್ಯದರ್ಶಿ ವಿನೋದ್ ಕುವಾರ್ ಪಲ್ಲಡ್ಕ, ಕಾರ್ಯದರ್ಶಿಗಳಾದ ಶಾಂತರಾಮ ಗೌಡ ಬೇಂಗದಪಡ್ಪು, ದಾಮೋದರ ಪುಣ್ಕೆತ್ತಡಿ, ಜ್ಯೋತಿ ಕಲ್ಕಾಡಿ, ಅಭಿವೃದ್ಧಿ ಸಮಿತಿ ಸಲಹೆಗಾರ ಕೇಶವ ಅಮೈ ಕಲಾಯಿಗುತ್ತು, ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ, ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರೆಗುಡ್ಡೆ, ಭವಾನಿಶಂಕರ ಪರಂಗಾಜೆ, ರಾಮ ನಾಯ್ಕ ಏಣಿತ್ತಡ್ಕ, ಬಾಲಕಷ್ಣ ಗೌಡ ಬೇಂಗದಪಡ್ಪು, ಕಾರ್ಯದರ್ಶಿಗಳಾದ ಶಶಿಕುವಾರ್ ಅಂಬಾ, ರಾಧಾಕೃಷ್ಣ ತುಂಬೆತ್ತಡ್ಕ, ಜತೆ ಕಾರ್ಯದರ್ಶಿಗಳಾದ ಆನಂದ ಎಸ್.ಟಿ.ಕೆವ್ಮಾರ, ಉಮೇಶ್ ಗೌಡ ಸಂಕೇಶ, ಶಾಂತಾರಾಮ್ ಬೇಂಗದಪಡ್ಪು, ಹರೀಂದ್ರ ಊರಾಜೆ ವಳಕಡಮ, ಸಚಿನ್ ಪಲ್ಲಡ್ಕ ಪಟ್ಟೆ, ಬೈಲುವಾರು ಸಮಿತಿ ಗ್ರಾಮ ಸಂಚಾಲಕ ಭವಿತ್‌ರಾಜ್ ಪಲ್ಲಡ್ಕ, ಸಹಸಂಚಾಲಕ ಪ್ರವೀಣ್‌ರಾಜ್ ಕೊಲ್ಯ ಮತ್ತಿತರರು ಪಾಲ್ಗೊಂಡಿದ್ದರು.