ಹಲ್ಲೆಗೀಡಾಗಿರುವ ಮಂಜುಭಾರ್ಗವ 
ಜಿಲ್ಲೆ

ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ; ಕಾರು ಅಡ್ಡಗಟ್ಟಿ ರಾಡ್​ನಿಂದ ಥಳಿಸಿದ ದುಷ್ಕರ್ಮಿಗಳು..

Webdesk - Ravikanth

ತುಮಕೂರು: ಭಜರಂಗದಳದ ಕಾರ್ಯಕರ್ತರ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದು, ಕೋಮುಸಂಘರ್ಷದ ಶಂಕೆ ಉಂಟಾಗಿದೆ. ತುಮಕೂರಿನ ಗುಬ್ಬಿ ಗೇಟ್​ ಬಳಿ ಈ ಹಲ್ಲೆ ನಡೆದಿದೆ.

ಭಜರಂಗದಳದ ತುಮಕೂರು ಜಿಲ್ಲಾ ಸಂಚಾಲಕ ಮಂಜುಭಾರ್ಗವ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ಕಾರ್ಯಕರ್ತ ಕಿರಣ್​ ಎಂಬವರ ಮೇಲೂ ಹಲ್ಲೆ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರೂ ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ರಾಡ್​ನಿಂದ ಹಲ್ಲೆ ಮಾಡಿದೆ. ಹಲ್ಲೆ ಮಾಡಿದವರು ಅನ್ಯಕೋಮಿಗೆ ಸೇರಿದವರು ಎನ್ನಲಾಗಿದ್ದು, ತಿಲಕ್​ ಪಾರ್ಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿದೆ.