ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿ ನಡೆಯುತ್ತಿರುವ ದಾಳಿಗಳಿಂದ ಅಂಗಡಿ ಮಾಲೀಕರು ಎಚ್ಚೆತ್ತುಕೊಳ್ಳುವಂತೆ ಕಾಣುತ್ತಿಲ್ಲ ಈ ಹಿನ್ನೆಲೆಯಲ್ಲಿ ನಿಯಮ ಮೀರಿದ ಮಾಲೀಕರ ವಿರುದ್ಧ ಎ್ಐಆರ್ ದಾಖಲಿಸಲಾಗುವುದು ಎಂದು ತಂಬಾಕು ನಿಯಂತ್ರಣ ಘಟಕ ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ವಿವಿಧ ತಂಬಾಕು ಉತ್ಪನ್ನ ಅಂಗಡಿಗಳ ಮೇಲೆ ದಾಳಿ ನಡೆಸಿ ಮಾತನಾಡಿದರು. ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲಾಗಿದೆ ಎಷ್ಟೇ ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿದರೂ ನಿಯಮ ಮೀರುವುದು ಕಂಡುಬಂದರೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. 2023 ಏಪ್ರಿಲ್‌ನಿಂದ 2024 ಜನವರಿವರೆಗೆ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ 32 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಕಾಯ್ದೆ 4 ಅಡಿ 239 ಪ್ರಕರಣ ಹಾಗೂ ಕಾಯ್ದೆ 6ಎ ಅಡಿ23 ಪ್ರಕರಣ ಸೇರಿ ಒಟ್ಟು 262 ಪ್ರಕರಣ ದಾಖಲಿಸಲಾಗಿದ್ದು 52 ಸಾವಿರ ರೂ.ದಂಡ ವಸೂಲಿ ಮಾಡಲಾಗಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು.
ಕೋಟ್ಪಾ-2003 ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿ ನಡೆಸಿಸಲಾಗಿದೆ, ಕಾಯ್ದೆ 4ರ ಅಡಿ ಕನಸವಾಡಿಯಲ್ಲಿ 14 ಪ್ರಕರಣಗಳನ್ನು ದಾಖಲಿಸಿ 2,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.