ಜಿಲ್ಲೆ

ಸುರಕ್ಷತಾ ಕ್ರಮ ತಿಳಿಸುವ ಪ್ರಯತ್ನ

ಇಂದಿರಾ ಎನ್ ಕೆ

ಗಂಗೊಳ್ಳಿ: ಯಾವುದೇ ಸಂದರ್ಭದಲ್ಲಿ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತಹ ತೀರಾ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಲು ಹೋಗಬಾರದು. ಈ ಬಗ್ಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಅರಿತುಕೊಂಡು ಎಲ್ಲರಿಗೂ ತಿಳಿಸುವ ಪ್ರಯತ್ನಮಾಡಬೇಕು ಎಂದು ಗಂಗೊಳ್ಳಿಯ ಕೆನರಾ ಬ್ಯಾಂಕ್ ಆಫೀಸರ್ ಸಾಗರ್ ಕೆ.ಶಿವದಾಸ್ ಹೇಳಿದರು.

ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಕ್ರಮ ಅಕೌಂಟ್‌ಗಳನ್ನು ತಡೆಗಟ್ಟುವ ಕುರಿತು, ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.

ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ.ಸಿ.ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ವಾಸು ದೇವಾಡಿಗ ಶುಭ ಹಾರೈಸಿದರು. ಕೆನರಾ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಬಿ.ಟಿ.ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠ ಮೇಸ್ತ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು.