ಕಾಸರಗೋಡು: ನಗರದ ಮೀನು ಮಾರುಕಟ್ಟೆಯಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಾಫಿ ಎಂಬಾತನ ವಿರುದ್ಧ ನಗರ ಮಹಿಳಾ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೀನು ಖರೀದಿಗೆ ಆಗಮಿಸಿದ್ದ 17ರ ಹರೆಯದ ಬಾಲಕಿಯನ್ನು ಹಿಡಿದೆಳೆದು ದೌರ್ಜನ್ಯಕ್ಕೆ ಮುಂದಾಗುತ್ತಿದ್ದಂತೆ ಬಾಲಕಿ ಬೊಬ್ಬಿಟ್ಟಿದ್ದು, ಈ ಸಂದರ್ಭ ಆರೋಪಿ ಪರಾರಿಯಾಗಿದ್ದಾನೆ. ಬಾಲಕಿ ನೀಡಿದ ದೂರಿನನ್ವಯ ಮಹಿಳಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಆರೋಪಿ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.