ಜಿಲ್ಲೆ

ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ

ಜಗದೀಶ ಹೊಂಬಳಿ

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಫಿನಾಯಿಲ್ ಕುಡಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ ಕೊಪ್ಪದ (23) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಯುವಕನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಹೋಗಿದ್ದೇಕೆ ಹಾಗೂ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಯುವಕನ ಸಹೋದರರಿಗೆ ಪೊಲೀಸರು ಕರೆ ಮಾಡಿ ಮಾಹಿತಿ ನೀಡಿದ್ದು, ಘಟನೆಗೆ ಕಾರಣ ಗೊತ್ತಾಗಬೇಕಿದೆ.