ಜಿಲ್ಲೆ

ಗ್ರಾಹಕರೇ ಗಮನಿಸಿ, ಸೆ.21 ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು ಬೈಯ್ಯಪ್ಪನಹಳ್ಳಿ-ಕೆ.ಆರ್.ಪುರ ಮೆಟ್ರೋ ರೈಲು ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಿರುವ ಹಳಿಯ ಸುರಕ್ಷತಾ ಪರಿಶೀಲನೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆ.21ರಂದು ಕೆ.ಆರ್.ಪುರ- ಗರುಡಾಚಾರ್ ಪಾಳ್ಯದ ನಡುವೆ ಪೂರ್ಣದಿನ ಮತ್ತು ಬೈಯಪ್ಪನಹಳ್ಳಿ-ಇಂದಿರಾನಗರ ನಡುವೆ ಅಂದು ಮಧ್ಯಾಹ್ನ 1.30ರಿಂದ ಸಂಜೆ 4.30ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇದೇ ಮಾರ್ಗದಲ್ಲಿ ಸಂಚರಿಸುವ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಗರುಡಾಚಾರ್ ಪಾಳ್ಯ, ಇಂದಿರಾನಗರ ಮತ್ತು ಕೆಂಗೇರಿ ನಡುವೆ ಎಂದಿನಂತೆ ಸಂಚಾರವಿರಲಿದೆ. ಹಸಿರು ಮಾರ್ಗದ ರೈಲು ಸೇವೆಯಲ್ಲಿಯೂ ಯಾವುದೇ ಬದಲಾವಣೆ ಇರುವುದಿಲ್ಲ.

ಇನ್ನು ಸಂಜೆ 4.30ರಿಂದ ರಾತ್ರಿ 11 ಗಂಟೆಯವರೆಗೂ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆಯೇ ಲಭ್ಯವಿರಲಿದೆ. ಗ್ರಾಹಕರು ಸಮಯ ಬದಲಾವಣೆಯಾಗಿರುವುದರ ಬಗ್ಗೆ ಗಮನ ಹರಿಸುವಂತೆ ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.